ಮುಂಬೈ: ಕೆಲ ದಿನಗಳಿಂದ ವದಂತಿಗೆ ಕಾರಣವಾಗಿದ್ದ ವಿಷಯ ಇದೀಗ ನಿಜವಾಗಿದೆ. ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ನಡುವಿನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ ಎನ್ನುವ ವದಂತಿ ಹರಡಿತ್ತು. ಆದರೆ ಅಧಿಕೃತವಾಗಿ ಯಾವುದೇ ಹೇಳಿಕೆಗಳನ್ನು ಇಬ್ಬರೂ ನೀಡಿರಲಿಲ್ಲ. ಆದರೆ ಈಗ ವಿಚ್ಛೇದನ ಪಡೆದಿರುವ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪಾಂಡ್ಯ ಕಳೆದ ನಾಲ್ಕು ವರ್ಷಗಳಿಂದ ನತಾಶಾ ಮತ್ತು ನಾನು ಜೊತೆಯಾಗಿ ಹೆಜ್ಜೆ ಹಾಕಿದ್ದೇವೆ. ಆದರೆ ಹಲವು ಕಾರಣಗಳಿಂದ ನಾವಿಬ್ಬರು ಪರಸ್ಪರ ಒಪ್ಪಿಗೆಯಿಂದ ದೂರ ಸರಿಯುತ್ತಿದ್ದೇವೆ. ಇಬ್ಬರ ಉತ್ತಮ ಭವಿಷ್ಯಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ನಮ್ಮಿಬ್ಬರಿಗೆ ಮಗ ಅಗಸ್ಯನಿದ್ದಾನೆ. ಆತನ ಜವಾಬ್ದಾರಿ ನಮ್ಮಿಬ್ಬರಿಗೂ ಇದೆ. ಆತನ ಖುಷಿ, ಸಂತೋಷಕ್ಕೆ ನಾವು ಎಲ್ಲವನ್ನೂ ಮಾಡುತ್ತೇವೆ. ಈ ಸಂದರ್ಭದಲ್ಲಿ ನಮ್ಮ ಖಾಸಗಿ ಕ್ಷಣಗಳಿಗೆ ಗೌರವ ನೀಡಿ ಎಂದು ಕಳಕಳಿಯ ಮನವಿ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.