Join The Telegram | Join The WhatsApp |
ಬೆಳಗಾವಿ :
ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ.
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧ ಬಳಿ ರಾಘವೇಂದ್ರ ಲೇಔಟ್ ನಲ್ಲಿ ಪಂಚಮಸಾಲಿ ಸಮಾಜದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು ಡಿಸೆಂಬರ್ 28 ರಂದು ಈ ಸಂಬಂಧ ಸರ್ವ ಪಕ್ಷ ಸಭೆ ನಡೆಸಲಾಗುತ್ತದೆ. ಡಿಸೆಂಬರ್ 29ರಂದು ಅಧಿಕೃತವಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Join The Telegram | Join The WhatsApp |