ಹುಬ್ಬಳ್ಳಿ :
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿ ಬಂಧಿತರಾಗಿದ್ದ ಹಿಂದೂ ಪರ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 29ರಂದು ಹುಬ್ಬಳ್ಳಿ ಶಹರ ಪೊಲೀಸರು ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿದ್ದರು. 31 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವನ್ನು ಮತ್ತೆ ಓಪನ್ ಮಾಡಿ ಅಯೋಧ್ಯೆ ರಾಮ ಮಂದಿರ ಕರ ಸೇವಕನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದೀಗ ಹುಬ್ಬಳ್ಳಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶ್ರೀಕಾಂತ ಪೂಜಾರಿ ಅವರಿಗೆ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಶ್ರೀಕಾಂತ ಪೂಜಾರಿ ಅವರ ಬಂಧನ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.