ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿಶ್ವ ಮೇ 15ರಂದು ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಅಂಜಲಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಹುಡುಕಾಟದ ನಂತರ ಪೊಲೀಸರು ವಿಶ್ವ ಅಲಿಯಾಸ್ ಗಿರೀಶ್ ನನ್ನು ಬಂಧಿಸಿದ್ದಾರೆ.

ಆರೋಪಿ ವಿಶ್ವನ ಬಗ್ಗೆ ತಿಳಿದುಕೊಂಡಷ್ಟೂ ಆತನ ಕೃತ್ಯ ಬಯಲಾಗುತ್ತಿದೆ. ಕಳ್ಳತನವೇ ಇವನ ವೃತ್ತಿ. ಅಮಾಯಕ ಹೆಣ್ಣು ಮಕ್ಕಳಿಗೆ ಮೋಸ ಮಾಡುತ್ತಿದ್ದ. ಜತೆಗೆ ಕುಡಿತದ ಚಟಕ್ಕೆ ಬಲಿಯಾಗಿದ್ದು, ಹಲವು ಬಾರಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಇದೀಗ ಆರೋಪಿ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ. ನೇಹಾ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ್ರೆ, ಅಂಜಲಿಯ ಕೊಲೆ ನಡೆಯುತ್ತಿರಲಿಲ್ಲ. ಈಗ ವಿಶ್ವನನ್ನು ಎನ್‌ಕೌಂಟ‌ರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.