ಬೆಳಗಾವಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಶನಿವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಪ್ರಲ್ಲಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನು ಪುಣೆಯಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಹುಬ್ಬಳ್ಳಿಗೆ ಕರೆತಂದು ತನಿಖೆ ನಡೆಸುವ ಸಾಧ್ಯತೆ ಇದೆ.
ಆದರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿ ನಾನು ಮತ್ತು ಅಣ್ಣ 32 ವರ್ಷಗಳಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದೇವೆ. ನನಗೂ ಮತ್ತು ಅವರಿಗೂ ಯಾವುದೇ ವ್ಯವಹಾರ ನಂಟು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.