ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾಸಿರ್ ಹುಸೇನ್ ಜಯ ಗಳಿಸಿದ ಬಳಿಕ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ.

ವಿಧಾನಸೌಧ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಇಲ್ತಾಜ್, ಮುನಾವರ್ ಮತ್ತು ಮೊಹಮ್ಮದ್ ನಾಶಿಪುಡಿ ಎಂಬುವರನ್ನು ಬಂಧಿಸಿದ್ದಾರೆ. ಈ ಪ್ರಕರಣದ ಸಂಬಂಧ ಪೊಲೀಸರು ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.