ಬೆಂಗಳೂರು:
ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಶುಕ್ರವಾರ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದೆ.

ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರಿಗೆ ಪ್ರಮುಖ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ವಿನಯ್ ಕುಲಕರ್ಣಿ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೇಮಕ ಮಾಡಲಾಗಿದೆ.