ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 9 ರಿಂದ 20 ರವರೆಗೆ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ವಿಶೇಷ ಅಧಿವೇಶನ ನಡೆಯುವ ಸಾಧ್ಯತೆ ಇದೆ.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶದ ನಡೆಸುವ ಕುರಿತು ಸ್ಪೀಕರ್ ಯು.ಟಿ. ಖಾದರ್ ಮತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಡಿಸೆಂಬರ್ 9 ರಿಂದ 20ರವರೆಗೆ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಅಧಿಕಾರಿಗಳು ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವರ್ಷವೂ ಅತ್ಯಂತ ಯಶಸ್ವಿಯಾಗಿ ಅಧಿವೇಶನ ನಡೆಸಲು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ವಿವರಿಸಿದರು.