ಉಡುಪಿ : ಇಲ್ಲಿಯ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ನವೀಕರಣ ಕೆಲಸ ನಡೆದಿತ್ತು. ಹೀಗಾಗಿ ರೋಗಿಗಳು ಇರಲಿಲ್ಲ. ಸೋಮವಾರ ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭ ಮಾಡುವಾಗ ಹಾಲ್ ನಲ್ಲಿ ಬೆಂಕಿ ಹೊತ್ತಿಕೊಂಡು ಶಬ್ದ ಕೇಳಿ ಬಂದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಕುಸುಮರವರು ಬಂದಿದ್ದು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಟಕ್ ಟಕ್ ಶಬ್ದ ಕೇಳಿ ಬಂದಿದ್ದು ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಡಾ. ಸತೀಜ್ ರಿಗೆ ಫೋನ್ ಮಾಡಿ ತಿಳಿಸಿದ್ದು, ಅಗ್ನಿಶಾಮಕ ದಳದವರಿಗೆ ತಿಳಿಸಿ ಬಂದಿರುವರು.ಮೊದಲ ಫ್ಲೋರ್ ನಲ್ಲಿ ಇಬ್ಬರು ಕೆಲಸದವರು ಉಳಿದುಕೊಂಡಿದ್ದು ಅವರು ಹೊರಗೆ ಬಂದಿದ್ದಾರೆ.