ಉಡುಪಿ: ನಗರದ ಬಾರ್ ವೊಂದರ ಮಾಲಕರ ಮನೆಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು ಬಾರ್ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ. ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರ ಗಾಯಗೊಂಡ ಅವರು ನಿಧನರಾಗಿದ್ದಾರೆ.

ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ ಆಗಮಿಸಿದ್ದು ಮನೆಯಲ್ಲಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿದೆ.

ಮನೆಯ ಬೆಡ್ ರೂಮಿನ ಎಸಿ ಬ್ಲಾಸ್ಟ್ ಆದ ಪರಿಣಾಮ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ದುರ್ಘಟನೆಯಲ್ಲಿ ರಮಾನಂದ ಶೆಟ್ಟಿ (52)ಮೃತಪಟ್ಟಿದ್ದಾರೆ.