ದೆಹಲಿ :
ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಮೊದಲ
ಪ್ರಕಟಗೊಂಡಿದ್ದು, ರಾಜ್ಯದ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪಟ್ಟಿ ಅಂತಿಮವಾಗಿದ್ದು, ಅಧಿಕೃತವಾಗಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ 6, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 36 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಶಿ ತರೂರ್​ ತಿರುವನಂತಪುರಂನಿಂದ ಟಿಕೆಟ್ ಪಡೆದಿದ್ದಾರೆ.

ಕರ್ನಾಟಕದ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.
ಕರ್ನಾಟಕದ 6 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್​ ಕುಮಾರ್, ತುಮಕೂರಿನಿಂದ ಎಸ್​ಪಿ ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು),ಹಾಸನಿಂದ ಶ್ರೇಯಸ್ ಪಟೇಲ್, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್, ಬಿಜಾಪುರದಿಂದ ಎಚ್​ಆರ್​ ಅಲ್ಗೂರ್​ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ ಹೆಸರನ್ನು ಕಾಯ್ದಿರಿಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ.

ಉಡುಪಿ ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ಕಾಯ್ದಿರಿಸಲಾಗಿದೆ

ತುಮಕೂರು- ಮುದ್ದಹನುಮೇಗೌಡ

ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್

ಹಾಸನ- ಶ್ರೇಯಸ್ ಪಟೇಲ್

ಚಿತ್ರದುರ್ಗ- ಬಿ.ಎಸ್.ಚಂದ್ರಪ್ಪ

ವಿಜಯಪುರ- ರಾಜು ಆಲಗೂರು

ಮಂಡ್ಯ- ಸ್ಟಾರ್ ಚಂದ್ರು

ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್