ಬೆಳಗಾವಿ :
ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿವೆ.
ಹಿಂದೂ ಸಂಘಟನೆಗಳು ಚಲೋ ಎಂ.ಕೆ. ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನ ಕೈಗೊಳ್ಳಲು ಮುಂದಾಗಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.
ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಧ್ವಜ ತೆರವು ಹಿನ್ನೆಲೆಯಲ್ಲಿ ಹನುಮಾನ್ ಮಂದಿರದ ಮುಂದೆ ಭಗವಾ ಧ್ವಜ ಹಾರಿಸಲು ಹಿಂದೂ ಸಂಘಟನೆಗಳಿಂದ ಕರೆ ನೀಡಲಾಗಿದ್ದು, ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಯುವಕರು ಸೇರಿದ್ದಾರೆ. ಸಂಬನ್ನವರ ಕಾಲೋನಿಯಲ್ಲಿ ಧ್ವಜ ಕಟ್ಟೆ ನಿರ್ಮಾಣ ಮಾಡಲು ಮುಂದಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೆಎಸ್ಆರ್ ಪಿ ತುಕಡಿಯನ್ನು ನಿಯೋಜಿಸಲಾಗಿದೆ.