Join The Telegram | Join The WhatsApp |
ಬೆಂಗಳೂರು-
ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯ ಅರಣ್ಯ ರಕ್ಷಕ (Forest guard) ಪದನಾಮ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಬುಧವಾರ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಎಂ. ಪಾಟೀಲ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅರಣ್ಯ ಇಲಾಖೆಯಲ್ಲಿನ ಅರಣ್ಯ ರಕ್ಷಕ (Forest guard) ವೃಂದದ ಹುದ್ದೆಯನ್ನು ಗಸ್ತು ಅರಣ್ಯ ಪಾಲಕ (Beat Forester) ಎಂದು ಬದಲಾವಣೆ ಮಾಡಲಾಗಿದೆ.
Join The Telegram | Join The WhatsApp |