ಬೆಳಗಾವಿ :

ರಾಜ್ಯದ ಪ್ರಮುಖ ಧಾರ್ಮಿಕ ತಾಣಗಳಾದ ಸವದತ್ತಿ ಯಲ್ಲಮ್ಮ ದೇವಸ್ಥಾನ ಮತ್ತು ಹುಲಿಗಿ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.
ಕಲಬುರಗಿಯಲ್ಲಿಂದು ಪತ್ರಕರ್ತರ ಜೊತೆ ಮಾತನಾಡಿದ ಅವರು,
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು. 87 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕೆ ಯಾವುದೇ ಹಣದ ಕೊರತೆ ಇಲ್ಲ. ಪ್ರವಾಸೋದ್ಯಮ ಇಲಾಖೆಯು 87 ಹೊರತುಪಡಿಸಿ ಒಂದಷ್ಟು ಜಾಗ ಪಡೆದು ಅಭಿವೃದ್ಧಿಪಡಿಸಲಿದೆ ಎಂದರು.

ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮ ದೇವಸ್ಥಾನವನ್ನು ಸಹ ಅಭಿವೃದ್ಧಿಪಡಿಸಲಾಗುವುದು. ಆ ದೇವಸ್ಥಾನಕ್ಕೂ ಸಹಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.