ಕುಂದಾಪುರ : ಬೈಂದೂರು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಅವರು ಕೆಲ ಸಮಯದಿಂದ ಬೆಂಗಳೂರಿನಲ್ಲಿ ವಾಸವಿದ್ದು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಪತ್ನಿ ನಿಧನರಾಗಿದ್ದರು. ಇಂದು ಸಂಜೆ 4:30ಕ್ಕೆ ಬನಶಂಕರಿ ಚಿತಾಗಾರದಲ್ಲಿ ಲಕ್ಷ್ಮೀನಾರಾಯಣ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ. 2008ರಲ್ಲಿ ಬೈಂದೂರು ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕೂ ಮೊದಲು ಎರಡು ಸಲ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಉದ್ಯಮಿಯಾಗಿ ಹೆಸರುಗಳಿಸಿದ್ದ ಇವರು ಸ್ನಾತಕೋತ್ತರ ಪದವಿ ಪಡೆದಿದ್ದರು.