ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ .ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

91 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಅವರನ್ನು ಎಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಜಯ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿ ಗುಣಮುಖರಾಗಿದ್ದರು.

ನಂತರ ಅವರಿಗೆ ವಯೋಸಹಜ ಕಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ಸುನಿಲ್ ಕಾಮತ್ ನೇತ್ರತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರ ಗೊಂಡ ಕಾರಣ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.