ಬೆಳಗಾವಿ :
ಎರಡು ತಿಂಗಳ ಹಿಂದೆ ಮತ್ತೆ ಬಿಜೆಪಿ ಸೇರ್ಪಡೆಗೊಂಡಾಗ ಮೊದಲ ಬಾರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೆಸರು ಮುನ್ನಲೆಗೆ ಬಂದಿತ್ತು. ಇದೀಗ ಹಾವೇರಿ ಲೋಕಸಭಾ ಕ್ಷೇತ್ರದಿಂದ ಇನ್ನೊಬ್ಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೆಸರು ಅಂತಿಮಗೊಂಡಿರುವುದರಿಂದ ಶೆಟ್ಟರ್ ಹೆಸರು ಬೆಳಗಾವಿಗೆ ಅಂತಿಮವಾಗಬಹುದು. ಬಿಜೆಪಿ ಇಷ್ಟರಲ್ಲೇ ತನ್ನ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು ಅದರಲ್ಲಿ ಜಗದೀಶ ಶೆಟ್ಟರ್ ಹೆಸರು ಘೋಷಣೆ ಆಗುವ ಸಾಧ್ಯತೆ ದಟ್ಟವಾಗಿದೆ.