ಶಿಮ್ಲಾ :
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಕಾಂಗ್ರೆಸ್ ಶಾಸಕರು ಮತ ನೀಡಿದ ನಂತರ ಇದೀಗ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದ ಅಂಚಿಗೆ ಸಾಗುವ ಲಕ್ಷಣ ಗೋಚರಿಸಿದೆ. ಇಂದು ಸಚಿವರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ಘೋಷಿಸಿದ್ದಾರೆ. ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ವೇಳೆ ಭಾವುಕರಾದ ಅವರು, ನನ್ನ ತಂದೆಯ ಪ್ರತಿಮೆ ಸ್ಥಾಪಿಸಲು ಸ್ವಲ್ಪ ಜಾಗ ಸಹ ಕೊಡುತ್ತಿಲ್ಲ ಎಂದರು. ವಿಕ್ರಮಾದಿತ್ಯ ಸಿಂಗ್, 6 ಬಾರಿ ಸಿಎಂ ಆಗಿದ್ದ ವೀರಭದ್ರ ಸಿಂಗ್ ಅವರ ಪುತ್ರರಾಗಿದ್ದಾರೆ.