
ಬೆಂಗಳೂರು: ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ, ಪರಿಷತ್ ಕಾಂಗ್ರೆಸ್ ಸದಸ್ಯ ಪ್ರಕಾಶ ಹುಕ್ಕೇರಿ ವಿಧಾನ ಪರಿಷತ್‌ನಲ್ಲಿ ಒತ್ತಾಯಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯ ಅತಿದೊಡ್ಡ ಪಟ್ಟಣವಾಗಿರುವ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು, ಚಿಕ್ಕೋಡಿ ಗಡಿಭಾಗದ ಜನರು ತಮ್ಮ ಕೆಲಸ ಕಾರ್ಯಗಳಿಗೆ 190 ಕಿಲೋಮೀಟರ್ ದೂರದ ಜಿಲ್ಲಾ ಕೇಂದ್ರ ಬೆಳಗಾವಿಗೆ ಬರಬೇಕಾಗಿದೆ, ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಲು ಚಿಕ್ಕೋಡಿ ಸೂಕ್ತ ಪಟ್ಟಣವಾಗಿದ್ದು, ಇದರಿಂದ ಆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ, ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಆ ಭಾಗದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.
ಚಿಕ್ಕೋಡಿಯಲ್ಲೇ ಕ್ಯಾನ್ಸರ್ ಆಸ್ಪತ್ರೆಯನ್ನು ಮಂಜೂರು ಮಾಡಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.