ಬೆಳಗಾವಿ: ಈ ಹಿಂದೆ ಅಸ್ತಿತ್ವದಲ್ಲಿದ್ದ ಹಿರೇಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ಶಿವಪುತ್ರಪ್ಪ ಚನ್ನಬಸಪ್ಪ(ಎಸ್.ಸಿ.)ಮಾಳಗಿ ಇದೀಗ ಮತ್ತೆ ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ. 1985 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ನಿಂದ ಶಾಸಕರಾಗಿದ್ದ ಅವರು ನಂತರ 1994,1999 ರಲ್ಲಿ ಜನತಾದಳ, ಸಂಯುಕ್ತ ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ನಡೆದ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಇದೀಗ ಅವರು ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.