ಬೆಳಗಾವಿ : ವಿಧಾನ ಪರಿಷತ್ ಮಾಜಿ ಸದಸ್ಯೆ ಸುನಂದಾತಾಯಿ ಲಿಂಗನಗೌಡ ಪಾಟೀಲ (72)ಅವರು ವಯೋಸಹಜ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಮೂಲತಃ ಹಿರೇ ಬಾಗೇವಾಡಿ ಗ್ರಾಮದವರಾದ ಇವರು ಒಂದು ಬಾರಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಅಂತ್ಯಸಂಸ್ಕಾರವನ್ನು ಇಂದು ಸಂಜೆ ಹಿರೇ ಬಾಗೇವಾಡಿ ಗ್ರಾಮದಲ್ಲಿ ನೆರವೇರಿಸಲಾಗುವುದು.ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಇದೆ.