ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಸಂಬಂಧ ಅವಘಢಗಳಿಗೆ ತುತ್ತಾಗಿ ನಾಲ್ವರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಆಡಳಿತ ಸೂಚನೆ ನೀಡಿದೆ. ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುಣೆಯ ಸುತ್ತಮುತ್ತಲ ತಾಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಪುಣೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತಗೊಂಡಿವೆ. ಇನ್ನಷ್ಟು ತಗ್ಗು ಪ್ರದೇಶಗಳು ಮುಳುಗಡೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ತಿಳಿಸಿದೆ.