ಬೀದರ್ : ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಟ್ರಕ್ ಮತ್ತು ಟಾಟಾ ಎಸ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಸಾವಿಗೀಡಾದವರು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಎಂದು ತಿಳಿದು ಬಂದಿದೆ.

ಇನ್ನೂ ಈ ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.

ಒಟ್ಟು 14 ಜನರು ಉಗ್ಗಿರ್ ನಿಂದ ಹೈದರಾಬಾದ್ ಗೆ ಟಾಟಾ ಎಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ದನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.