ಹುನಗುಂದ: ಹುನಗುಂದ ತಾಲೂಕು ದನ್ನೂರು ಟೋಲ್ ನಾಕಾ ಸನಿಹ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಲಾರಿ ಮತ್ತು ಕಾರು ಅಪಘಾತಕ್ಕೆ ನಾಲ್ವರು ಬಲಿಯಾಗಿದ್ದಾರೆ.
ಲಾರಿ ಮತ್ತು ಕಾರಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಹೊಸಪೇಟೆ ಸನಿಹದ ಹುಲಿಗೆಮ್ಮ ದೇವಸ್ಥಾನದ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಹುನಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಬಿದರಕುಂದಿಯ ಗುತ್ತಿಗೆದಾರ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ(45), ಕಾರು ಚಾಲಕ ಮಹಮ್ಮದ್ ರಫೀಕ್ ಗುಡ್ನಾಳ(25), ಮುದ್ದೇಬಿಹಾಳದ ರಾಮಣ್ಣ ನಾಯಕ(50) ಎಂಬುವರು ಮೃತಪಟ್ಟಿದ್ದಾರೆ. ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.