ಕುಂದಗೋಳ :
ಕುಂದಗೋಳ ತಾಲೂಕು ಬೆಳ್ಳಿಗಟ್ಟಿ ಗ್ರಾಮದ ಬಳಿ ಇಂದು ಭೀಕರ ಸರಣಿ ಅಪಘಾತಕ್ಕೆ ನಾಲ್ವರು ಸ್ಥಳದಲ್ಲಿ ಬಲಿಯಾಗಿದ್ದಾರೆ.

ಮೃತರನ್ನು ಹಾಸನದ ಮಣಿಕಂಠ (26), ಪವನ್ (23), ಚಂದನ್ (31), ಬೆಂಗಳೂರಿನ ಪ್ರಭು (34)ಎಂದು ಗುರುತಿಸಲಾಗಿದೆ. ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರು -ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಮತ್ತು ಒಂದು ಲಾರಿ ಮಧ್ಯೆ ಈ ಅವಘಡ ಸಂಭವಿಸಿದೆ. ಹಾಸನದಿಂದ ಗೋವಾಕ್ಕೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.