ಬೆಳಗಾವಿ :
ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ರವಿವಾರ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ ಟೇಲರ್ ಪಲ್ಟಿಯಾಗಿದೆ. ಇದರಿಂದಾಗಿ ಟ್ರ್ಯಾಕ್ಟರ್‌ ಅಡಿ ಸಿಲುಕಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮತ್ತೊಬ್ಬರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮಾಲಾಬಾಯಿ ರವಸಾಬ್ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ (50), ಭಾರತಿ ವಡ್ರಾಳೆ (40) ಹಾಗೂ ಶೇಕೂ ನರಸಾಯಿ (45) ಮೃತಪಟ್ಟಿದ್ದಾರೆ. ನಾಲ್ವರು ಮಹಿಳೆಯರು ಕೃಷಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದರು. ಶೇಡಬಾಳ ಗ್ರಾಮದ ಸಮೀಪ ಜಮಖಂಡಿ-ಮೀರಜ್ ರಸ್ತೆಯಲ್ಲಿ ಬರುವಾಗ ಟ್ರ್ಯಾಕ್ಟರ್ ಟೇಲರ್ ಚಕ್ರ ಕಟ್ಟಾಗಿ, ಇವರ ಮೇಲೆ ಬಿದ್ದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಪರಿಶೀಲಿಸಿ ಮೃತರ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಕಾಗವಾಡ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.