ಉಡುಪಿ: ಉಡುಪಿ/ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಇದೀಗ ಸಂಸದರ ವಕೀಲರಾದ ಶಾಮ ಸುಂದರ ನಾಯರಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಅವರ ಫೋಟೋ ದುರುಪಯೋಗ ಮಾಡಿಕೊಂಡು ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಂಚಕರು, ಶ್ರೀನಿವಾಸ ಪೂಜಾರಿ ಅವರ ಫೋಟೋ ಮತ್ತು ಮಾಹಿತಿಗಳನ್ನು ದುರುಪಯೋಗ ಮಾಡಿಕೊಂಡು ಅವರ ಹೆಸರನ್ನು ಕೆಡಿಸಲು ಮುಂದಾಗಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.