ಬೆಂಗಳೂರು : ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ನೀಡಿ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆ ಅನ್ವಯ ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದವರೆಗಿನ ಪ್ರಕರಣಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಇ-ಮೇಲ್

2 [email protected]

ಅಥವಾ ಇ-ಜನ್ಮ ಸಹಾಯವಾಣಿ ಸಂಖ್ಯೆ 1800 425 6578
ಸಂಪರ್ಕಿಸಬಹುದು.

ಜನನ/ಮರಣ ನಡೆದ 21 ದಿನಗಳ ಒಳಗಾಗಿ ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣಪತ್ರ ವಿತರಿಸಬೇಕು. 21 ದಿನಗಳಿಂದ 30 ದಿನಗಳ ನಡುವೆ ನೋಂದಣಿ ಮಾಡಿದರೆ 2 ರು. ವಿಳಂಬ ಶುಲ್ಕ, 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ 5 ರು. ಶುಲ್ಕ ಪಡೆದು ನೋಂದಣಿ ಮಾಡಬಹುದು.ಕರ್ನಾಟಕ ಜನನ, ಮರಣ ನೋಂದಣಿ ನಿಯಮಗಳ ಪ್ರಕಾರ 1 ವರ್ಷದ ಬಳಿಕ ನೋಂದಣಿ ಮಾಡಿದರೆ ಪ್ರಥರ್ಮ ದರ್ಜೆ ದಂಡಾಧಿಕಾರಿ ಅವರ ಆದೇಶದ ಜತೆಗೆ 10 ರು. ವಿಳಂಬ ಶುಲ್ಕ ಪಡೆದು ನೋಂದಣಿ ಮಾಡಬೇಕು.