Join The Telegram | Join The WhatsApp |
ಬೆಂಗಳೂರು-
ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮನೆಬಾಗಿಲಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ನೆಗಡಿ, ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಂದ ಹಿಡಿದು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಗಂಭೀರ ಕಾಯಿಲೆಗಳಿಗೂ ಗ್ರಾಮೀಣ ಜನರ ಮನೆ ಬಾಗಿಲಿಗೇ ವೈದ್ಯಕೀ ಸೇವೆ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಜನವರಿ 1 ರಿಂದ ರಾಜ್ಯದಲ್ಲಿ ಮೊದಲ ಹಂತವಾಗಿ ಬೀದರ್, ಚಾಮರಾಜನಗರ, ಚಿಕ್ಕಮಗಳೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆ ಜಾರಿಗೆ ತರಲಿದೆ.
ಮುಖ್ಯಮಂತ್ರಿ ಆರೋಗ್ಯ ವಾಹಿನಿ ಯೋಜನೆಗಾಗಿ ಬಜೆಟ್ ನಲ್ಲಿ 11 ಕೋಟಿ ರೂ. ಅನುದಾನ ಮೀಸಲಿಡಲಾಗಿತ್ತು. ಯೋಜನೆಯಡಿ ಅಗತ್ಯ ವೈದ್ಯಕೀಯ ಉಪಕರಣಗಳೊಂದಿಗೆ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಚಾರಿ ಕ್ಲಿನಿಕ್ ಗಳ ಮೂಲಕ ಜನರ ಮನೆ ಬಾಗಿಲಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.
Join The Telegram | Join The WhatsApp |