ಬೆಳಗಾವಿ :
ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ಅವಧಿವರೆಗೆ ಅನುಪಮ ಸೇವೆ ಸಲ್ಲಿಸಿದ್ದ
ಧಾರವಾಡ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಅವರು ಗುರುವಾರ ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ.

1986 ರಿಂದ 1993 ರ ವರೆಗೆ ಪ್ರೌಢಶಾಲಾ ಶಿಕ್ಷಕರಾಗಿ, ನಂತರ 1994 ರಿಂದ ಇಲ್ಲಿಯವರೆಗೆ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಪ್ರೊಫೆಷನರಿ ಅಧಿಕಾರಿಯಾಗಿ ವಿವಿಧ ಹುದ್ದೆಗಳಲ್ಲಿ ವಿವಿಧ ತಾಲೂಕು, ಜಿಲ್ಲೆ, ವಿಭಾಗಗಳಲ್ಲಿ ಕೆಲಸ ನಿರ್ವಹಿಸಿದ್ದ ಅವರು ಇಂದು ಸರಕಾರಿ ಸೇವಾ ನಿಯಮಗಳ ಪ್ರಕಾರ ವಯೋ ನಿವೃತ್ತಿ ಹೊಂದುತ್ತಿದ್ದಾರೆ.
ಕಳೆದ 37 ವರ್ಷಗಳ ಶಿಕ್ಷಣ ಇಲಾಖೆಯಲ್ಲಿ ಉತ್ತಮವಾದ ಕೆಲಸ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.

2018 ರಲ್ಲಿ ರಾಷ್ಟ್ರ ಪತಿಗಳಿಂದ SILVER STAR ನ್ಯಾಷನಲ್ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿತ್ತು.