ಹೆಬ್ರಿ : ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹೆಬ್ರಿ ವತಿಯಿಂದ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಉದ್ಯಮಿ ಯೋಗೀಶ್ ಭಟ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಗಾಂಧಿ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನತೆಗೆ ಗಾಂಧಿ ಚಿಂತನೆಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಅವರು ಆಶಯ ನುಡಿಗಳನ್ನು ಆಡುತ್ತಾ ಗಾಂಧಿ ಚಿಂತನೆಗಳನ್ನು ಇಂದಿನ ಕಾಲಮಾನಕ್ಕೆ ಅನುಗುಣವಾಗಿ ಸಂದರ್ಭಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿಷ್ಣುಮೂರ್ತಿ ಪ್ರಭು ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಇಂದಿನ ಹಲವಾರು ಸಮಸ್ಯೆಗಳಿಗೆ ಗಾಂಧಿ ಚಿಂತನೆಗಳಲ್ಲಿ ಪರಿಹಾರವಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನವೀನ್ ಶೆಟ್ಟಿ, ಮಡಾಮಕ್ಕಿ ಅವರು ಗಾಂಧಿ ತತ್ವಗಳ ಚಿಂತನ ಮಂಥನ ನಡೆಸಿದರು.
ಸುಲತಾ ಹೆಗ್ಡೆ, ಪುಷ್ಪಾವತಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಅಭಿನಂದಿಸಲಾಯಿತು.

ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ. ಪ್ರವೀಣ್ ಕುಮಾರ್ ಎಸ್ ಸ್ವಾಗತಿಸಿದರು

ಗೌರವ ಕಾರ್ಯದರ್ಶಿ ಮಂಜುನಾಥ್ ಕುಲಾಲ್ ಶಿವಪುರ ವಂದಿಸಿದರು.ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಪವಿತ್ರ ಅವರು ಕಾರ್ಯಕ್ರಮ ನಿರೂಪಿಸಿದರು.