ದೆಹಲಿ :
ದೇಶದಲ್ಲಿ ಈ ವರ್ಷ ಭರ್ಜರಿ ಮಳೆ ಬೀಳುವ ಸಾಧ್ಯತೆ ಇದೆ.
ಕರ್ನಾಟಕ ಒಳಗೊಂಡ ದಕ್ಷಿಣ ಭಾರತದಲ್ಲೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ. ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ. ವಾಯುವ್ಯದಲ್ಲಿ ಸಾಮಾನ್ಯ ಮತ್ತು ದೇಶದ ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. 166.9 2.2. ಅಥವಾ ಶೇ.92ರಿಂದ 108ರಷ್ಟು
ಮಳೆ ಆಗಲಿದೆ. ದಕ್ಷಿಣ ಭಾರತದ ಕೆಲವು ಪ್ರದೇಶ ಹೊರತುಪಡಿಸಿ ಜೂನ್‌ನಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಕಳೆದ ವರ್ಷದ ಮಳೆ :
2023 ರಲ್ಲಿ ಜೂ.8 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶ ಮಾಡಿದ್ದವು. ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ 7 ದಿನ ವಿಳಂಬವಾಗಿ ಆಗಮನವಾಗಿತ್ತು. ಕಳೆದ ವರ್ಷ ದೇಶದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.93 ರಷ್ಟು ಮಳೆ ಸುರಿದಿತ್ತು.