ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ.ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ.

ಅತ್ಯಂತ ಮಹತ್ವದ ನಿರ್ಧಾರ ತೆಗೆದುಕೊಂಡ ಸಿಎಂ : ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ನೇ ತೃತ್ವದ ರಾಜ್ಯ 7ನೇ ವೇತನ ಆಯೋಗದ ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು. ಬಳಿಕ ಸಿಎಂ,ಇದನ್ನು ಜಾರಿ ತರುವ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲದೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಯನ್ನು ಪರಿಷ್ಕರಿಸುವ ನಿರ್ಧಾರವನ್ನು ಮುಂದೂಡುತ್ತ ಬಂದಿತ್ತು. ಆದರೆ ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ 7 ನೇ ವೇತನ ಆಯೋಗ ವರದಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ನಿರ್ಧಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿರಲಿಲ್ಲ. ಅಲ್ಲದೇ ಸಂಪನ್ಮೂಲ ಕೊರತೆ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸಲಹೆ ಆಧರಿಸಿ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಯನ್ನು ಪರಿಷ್ಕರಿಸುವ ನಿರ್ಧಾರವನ್ನು ಮುಂದೂಡುತ್ತ ಬಂದಿತ್ತು. ಆದರೆ ಇದೀಗ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಸುಧಾಕ‌ರ್ ರಾವ್ ನೇತೃತ್ವದ ಏಳನೇ ವೇತನ ಆಯೋಗ ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 244 ಪುಟಗಳ ವರದಿಯನ್ನು ಸಲ್ಲಿಸಿತ್ತು.

ಆರಂಭಿಕ ವೃಂದದ ನೌಕರರ ಕನಿಷ್ಠ ಮೂಲ ವೇತನ ತಿಂಗಳಿಗೆ ₹17 ಸಾವಿರ ಇದ್ದು, ಅದನ್ನು ಗರಿಷ್ಠ ₹27 ಸಾವಿರಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಠ ವೇತನ ಈಗ ₹1,04,600 ಇದ್ದು, ಅದನ್ನು ₹1,67,200ಕ್ಕೆ ಪರಿಷ್ಕರಿಸುವಂತೆ ಆಯೋಗ ಶಿಫಾರಸು ಮಾಡಿತ್ತು. ಪ್ರಸ್ತುತ 1:8.86 ಕನಿಷ್ಠ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು 1:8.93ಕ್ಕೆ ಹೆಚ್ಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದೆ.

ತಿಂಗಳ ಪಿಂಚಣಿಯನ್ನು ಮೂಲ ವೇತನದ ಶೇ 50ರಷ್ಟು, ಕುಟುಂಬ ಪಿಂಚಣಿಯನ್ನು ಶೇ 30ರಷ್ಟು ಮುಂದುವರಿಸಿದೆ. ಪಿಂಚಣಿಯು ಕನಿಷ್ಠ ₹13,500ರಿಂದ ₹1,20,600 ವರೆಗೆ ನಿಗದಿ ಮಾಡಿದೆ. 70-80 ವರ್ಷ ವಯಸ್ಸಿನ ಪಿಂಚಣಿದಾರರಿಗೆ ಮೂಲ ಪಿಂಚಣಿಯು ಹೆಚ್ಚುವರಿ ಶೇ 10ರಷ್ಟು ಹೆಚ್ಚಳ ಆಗಬೇಕು ಎಂದು ಶಿಫಾರಸು ಮಾಡಲಾಗಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆ ವೇತನ ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿದೆ.

ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕ‌ರ್ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೈಗೊಂಡಿತ್ತು. ಬಾಕಿ ಉಳಿದಿರುವ ಶೇ 10.50ರಷ್ಟು ನೀಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

2022ರ ಜುಲೈನಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆಯನ್ನು ಜಾರಿ ಮಾಡುವಂತೆ ಆಯೋಗ ಶಿಫಾರಸು ಮಾಡಿತ್ತು. ಆಯೋಗದ ಬಹುತೇಕ ಶಿಫಾರಸುಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದೂ ಮೂಲಗಳು ಹೇಳಿವೆ.

ಈಗಾಗಲೇ ಶೇ 17ರಷ್ಟು ವೇತನ ಕೊಡಲಾಗುತ್ತಿದೆ. ಅದಕ್ಕಾಗಿ, ವಾರ್ಷಿಕ ₹10 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಆಯೋಗದ ಶಿಫಾರಸಿನಂತೆ ಶೇ 27.50ಕ್ಕೆ ಹೆಚ್ಚಿಸಿದರೆ ವಾರ್ಷಿಕ ಸುಮಾರು ₹8 ಸಾವಿರ ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ ಎನ್ನಲಾಗಿದೆ.