Join The Telegram | Join The WhatsApp |
ಬೆಂಗಳೂರು-
ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ.
ಹಿಜಾಬ್ ವಿವಾದ ಭುಗಿಲೆದ್ದ ನಂತರ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೀಗಾಗಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪಿಸಿ ಕೊಡುವಂತೆ ಬೇಡಿಕೆ ಇಟ್ಟು, ಸರ್ಕಾರಕ್ಕೆ 13 ಅರ್ಜಿ ಸಲ್ಲಿಸಿದ್ದಾರೆ. ಇದರ ಪೈಕಿ ಸರ್ಕಾರ 2 ಕಾಲೇಜು ಸ್ಥಾಪಿಸಲು ಅನುಮತಿ ನೀಡಿದೆ.
ಪಿಯುಸಿ ಯಿಂದ ಪದವಿವರೆಗಿನ ಕಲಿಕೆಗೆ ಕಾಲೇಜು ಸ್ಥಾಪನೆ ಮಾಡಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. ಮೂರು ತಿಂಗಳ ಹಿಂದೆ, ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ದೊರೆತಿತ್ತು. ಪ್ರತಿ ಕಾಲೇಜಿಗೆ 2.50 ಕೋಟಿ ರು.ಅನುದಾನವನ್ನೂ ಮೀಸಲಿರಿಸಲಾಗಿದ್ದು, ವಕ್ಫ್ ಬೋರ್ಡ್‌ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿ ಈ ವೆಚ್ಚವನ್ನು ಭರಿಸಲು ನಿರ್ಧರಿಸಲಾಗಿದೆ.
ಬೆಂಗಳೂರು, ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
Join The Telegram | Join The WhatsApp |