ಬೆಂಗಳೂರು: ಪ್ರಸಕ್ತ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜು. 31ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಷರತ್ತುಗಳಿಗೆ ಒಳಪಟ್ಟು ಜು. 9ರವರೆಗೆ ನಡೆಸಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಜೂ. 25ರಂದು ರಾಜ್ಯ ಸರ್ಕಾರ ಆದೇಶಿ ಸಿತ್ತು. ದಿನಾಂಕ ವಿಸ್ತರಿಸುವಂತೆ ಒತ್ತಡ ಹೆಚ್ಚಾಗಿದ್ದರಿಂದ ವರ್ಗಾವಣೆ ಅವಧಿಯನ್ನು ಜು.15ಕ್ಕೆ ವಿಸ್ತರಿಸಿ ಆದೇಶಿಸ ಲಾಗಿತ್ತು. ಇದೀಗ ಎರಡನೇ ಬಾರಿಗೆ ಅವಧಿ ವಿಸ್ತರಿಸಲಾಗಿದೆ.