ಬೆಂಗಳೂರು :
ಜನವರಿ 22 ಭಾರತದ ಇತಿಹಾದ ಪುಟಗಳಲ್ಲಿ ಅಚ್ಚಾಗುವ ದಿನ. ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾಗುವ ಶುಭ ಗಳಿಗೆ. ಅದರಲ್ಲೂ ಅಂದು ಬಾಲ ರಾಮನ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಮನೆಮನೆಗೆ ಅಯೋಧ್ಯೆಯಿಂದ ಈಗಾಗಲೇ ಅಕ್ಷತೆ ಬಂದು ತಲುಪುತ್ತಿದೆ. ಜೊತೆಗೆ ಕೆಲವರು ಅಯೋಧ್ಯೆಗೆ ಹೋಗಲು ಯೋಜನೆ ಮಾಡ್ತಿದ್ದಾರೆ. ಕೆಲವರು ಅಂದು ರಾಮ ಭಜನೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗುತ್ತಿದ್ದಾರೆ, ಮತ್ತೆ ಕೆಲವರು ಆ ದಿನ ರಾಜ ಜ್ಯೋತಿ ಬೆಳಗಿ ದೀಪಾವಳಿಯಾಗಿ ವಿಶೇಷವಾಗಿಸಬೇಕೆಂದುಕೊಂಡಿದ್ದಾರೆ. ಈ ನಡುವೆ ಅಯೋಧ್ಯಯಲ್ಲಿ ಪ್ರಭು ಶ್ರೀ ರಾಮ ಮೂರ್ತಿ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಸಂಭ್ರಮ ಆಚರಿಸಲು ರಾಜ್ಯದ ಶಾಲೆಗಳಿಗೆ ರಜೆ ನೀಡುವಂತೆ ಹಿಂದೂಪರ ಸಂಘಟನೆಗಳು ಶಾಲಾ ಶಿಕ್ಷಣ ಇಲಾಖೆಗೆ ಒತ್ತಾಯಿಸಿವೆ.

ಜನವರಿ 22ರಂದು ಶಾಲೆಗೆ ರಜೆ ನೀಡಿ ಅಥವಾ ಶಾಲೆಗಳಲ್ಲಿ ರಾಮಮೂರ್ತಿಗೆ ಪೂಜೆ ಸಲ್ಲಿಸಿ ಶಾಲೆಯಲ್ಲಿ ಪ್ರಾರ್ಥನೆ ಮಾಡಿಸಿ. ಬಳಿಕ ಒಂದು ಕ್ಲಾಸ್ ಆಯೋಧ್ಯೆಯ ರಾಮನ ಬಗ್ಗೆ ಮಕ್ಕಳಿಗೆ ಪಾಠ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಈ ಕೆಲಸ ಮಾಡಲಾಗಿದೆ. ಜೊತೆಗೆ ಕೆಲವು ಖಾಸಗಿ ಶಾಲೆಗಳಲ್ಲಿ ರಾಮಮಂದಿರದ ದಿನ ಪೂಜೆ ಮಾಡಲಾಗುತ್ತದೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿಯೂ ಈ ಬಗ್ಗೆ ಗಮನ ಹರಿಸುವಂತೆ ಇಲ್ಲವಾದರೆ ಅಂದು ಶಾಲೆಗಳಿಗೆ ರಜೆ ನೀಡುವಂತೆ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಒತ್ತಾಯ ಮಾಡಿವೆ.

ಸದ್ಯ ಶಿಕ್ಷಣ ಇಲಾಖೆ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದೆ.

ಆದರೆ ಖಾಸಗಿ ಶಾಲೆಗಳು ಮಾತ್ರ ಈ ನಿರ್ಧಾರ ಸ್ವಾಗತಾರ್ಹ. ರಜೆ ನೀಡುವ ಹಕ್ಕು ಸರ್ಕಾರಕ್ಕೆ ಇದೆ. ಆದರೆ ರಾಮ ಮಂದಿರ ಉದ್ಘಾಟನೆಯ ದಿನ ರಜೆ ನೀಡಿಲ್ಲವಾದರೂ ನಾವು ಮಕ್ಕಳಿಗೆ ಪ್ರಭು ರಾಮನ ಬಗ್ಗೆ ರಾಮಮಂದಿರದ ಬಗ್ಗೆ ಹೇಳಿಕೊಡ್ತೀವಿ.
ಸಾಧ್ಯವಾದ್ರೆ ಶಾಲೆಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡ್ತೀವಿ ಎಂದು ತಿಳಿಸಿವೆ.

ಎಲ್ಲೆಡೆ ರಾಮಮಂದಿರ ಪ್ರತಿಷ್ಠಾಪನೆಯ ಜ್ವರ ಹೆಚ್ಚಾಗಿದ್ದು, ಜನವರಿ 22 ರಂದು ಶಾಲೆಗೆ ರಜೆ ನೀಡುವ ಬಗ್ಗೆ ಒತ್ತಾಯ ಶುರುವಾಗಿದೆ. ಆದರೆ ಶಿಕ್ಷಣ ಇಲಾಖೆ ಈ ವಿಚಾರದಲ್ಲಿ ಯಾವ ನಿರ್ಧಾರಕ್ಕೆ ಬರುತ್ತೆ ಎಂದು ಕಾದು ನೋಡಬೇಕಿದೆ.