Join The Telegram | Join The WhatsApp |
ಬೆಂಗಳೂರು:
ಶಾಲೆ, ಪಿಯು ಕಾಲೇಜುಗಳಲ್ಲಿ ಧ್ಯಾನ ಮತ್ತು ನೈತಿಕ ಶಿಕ್ಷಣ ಬೋಧನೆ ಕುರಿತು ಡಾ.ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರ ರಚಿಸಿದ ಸಮಿತಿಯಲ್ಲಿ ಆರು ಶಿಕ್ಷಣ ತಜ್ಞರು ಇದ್ದು, ಸದಸ್ಯರಾಗಿ ಬೆಂಗಳೂರಿನ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ಜಿ ದ್ವಾರಕನಾಥ, ವಿಭು ಅಕಾಡೆಮಿಯ ಡಾ.ವಿ.ಬಿ ಆರತಿ, ಡ್ರೀಮ್ ಎ ಡ್ರೀಮ್ ಸಿಇಒ ಸುಚೇತಾ ಭಟ್, ಸೋಫಿಯಾ ಪ್ರೌಢ ಶಾಲೆ ಪ್ರಾಂಶುಪಾಲರಾದ ಸಿಸ್ಟರ್ ಅಲ್ಲನ ಎಸ್ ಎನ್ ಡಿ ಹಾಗೂ ಬಾಗೇಪಲ್ಲಿ ಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಬಿ ಅಮೀರ್ ಖಾನ್ ಅವರನ್ನು ನೇಮಿಸಿದೆ. ಸರ್ಕಾರಕ್ಕೆ ವರದಿ ನೀಡಲು ಸಮಿತಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಈ ಕುರಿತು ಪ್ರಾಥಮಿಕ ಶಿಕ್ಷಣ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿ ಹೊರಡಿಸಿದ್ದಾರೆ.
ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯ. ಇದರಿಂದ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ ಹೆಚ್ಚಾಗಿ, ಏಕಾಂಗ್ರತೆ ಕೂಡ ಮೂಡಲು ಸಹಕಾರಿಯಾಗುತ್ತದೆ.ವಿದ್ಯಾರ್ಥಿಗಳ ಭೌತಿಕ, ಮಾನಸಿಕ ಆರೋಗ್ಯದ ಮೇಲೆ ಧ್ಯಾನ ಅನುಕೂಲಕರ ಪರಿಣಾಮ ಬೀರುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಧ್ಯಾನವನ್ನು ಶಾಲೆಗಳಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.
Join The Telegram | Join The WhatsApp |