ನವದೆಹಲಿ:
ಮುಂದಿನ ವರ್ಷ ಮಾರ್ಚ್
ವೇಳೆಗೆ ದೇಶದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪ್ರಾರಂಭಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬುಧವಾರ ಈ ಬಗ್ಗೆ ಮಾತ್ರ ನಾಡಿದ ಅವರು ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಚಾಲಕರು
ನಿಖರವಾದ ದೂರಕ್ಕೆ ಶುಲ್ಕ ನಿಗದಿಪಡಿಸುವ ಉದ್ದೇಶದಿಂದ ಈಗಿರುವ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಅಳವಡಿಸುವುದು ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲಾಗುವುದು ಎಂದಿದ್ದಾರೆ.
1000 ಕಿ.ಮೀ.ಗಿಂತ ಕಮ್ಮಿ ಅಂತರದ ಹೈವೇಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು 1.5-2 ಲಕ್ಷ ಕೋಟಿ ರೂ.ವಿನಿಯೋಗಿಸಲಾಗುವುದು ಎಂದು ಅವರು ತಿಳಿಸಿದರು.