ದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ ಶಾಸ್ತ್ರಿ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಭಾಕರ್ ಅವರು ಇಂದು ಬಿಜೆಪಿ ಸೇರಲಿದ್ದಾರೆ. Xನಲ್ಲಿ ರಾಜೀನಾಮೆ ನೀಡಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಪಕ್ಷದ ಆದ್ಯತೆಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ.
ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇದೇ ಹೊತ್ತಿನಲ್ಲಿ ವಿಭಾಕರ ಶಾಸ್ತ್ರಿ ರಾಜೀನಾಮೆ ನೀಡಿದ್ದಾರೆ. ಮೊನ್ನೆ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಪಕ್ಷಕ್ಕೆ ಗುಡ್​​ಬೈ ಹೇಳಿ ಬಿಜೆಪಿ ಸೇರಿದ್ದರು. ಇದೀಗ ಶಾಸ್ತ್ರಿ ಮೊಮ್ಮಗ ಪಕ್ಷ ಬಿಡ್ತಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್​ಗೆ ಇದು ದೊಡ್ಡ ಪೆಟ್ಟು ನೀಡಿದೆ.