Join The Telegram | Join The WhatsApp |
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ವಿವಾದಿತ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತ ಜಯಂತಿಗೆ ರಾಜ್ಯ ಹೈಕೋರ್ಟ್ ಅನುಮತಿ ನೀಡಿದೆ.
ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ ಮತ್ತು ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠವು ಅರ್ಜಿ ವಿಚಾರಣೆ ನಡೆಸಿ, ದತ್ತ ಪಾದುಕೆಗೆ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ಸಮಿತಿ ಮತ್ತು ಭಕ್ತ ಸಮುದಾಯಕ್ಕೆ ಅನುಮತಿ ನೀಡಿದೆ. ಅರ್ಚಕರು ಮತ್ತು ಮುಜಾವರ್ ಒಳಗೊಂಡು ಪೂಜಾ ಕೈಂಕರ್ಯ ನೆರವೇರಿಸಲು ಸರ್ಕಾರ ಸಮಿತಿ ರಚನೆ ಮಾಡಿದೆ.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಬುಧವಾರ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ಅನುಮತಿಸಿದೆ.
ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು.
Join The Telegram | Join The WhatsApp |