ಟೊರಾಂಟೊ: ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ. ಗುಕೇಶ್ ಅವರು ಕ್ಯಾಂಡಿಡೇಟ್ಸ್‌ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಇದರೊಂದಿಗೆ ಚೆಸ್‌ ಇತಿಹಾಸದಲ್ಲೇ ವಿಶ್ವ ಚಾಂಪಿಯನ್‌ಗೆ ಸವಾಲಿಗ (ಚಾಲೆಂಜರ್‌) ಆದ ಅತಿ ಕಿರಿಯ ಆಟಗಾರ ಎಂಬ ಶ್ರೇಯಸ್ಸಿಗೆ ಅವರು ಪಾತ್ರರಾಗಿದ್ದಾರೆ.

ಈ ವರ್ಷದ ಕೊನೆಯಲ್ಲಿ ಡಿ. ಗುಕೇಶ್ ಅವರು ಪ್ರಸ್ತುತ ಹಾಲಿ ವಿಶ್ವ ಚಾಂಪಿಯನ್ ಆಗಿರುವ ಚೀನಾದ ಡಿಂಗ್‌ ಲಿರೆನ್ ಅವರನ್ನು ಎದುರಿಸಲಿದ್ದಾರೆ.

ಭಾನುವಾರ ನಡೆದ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಅಮೆರಿಕದ ಹಿಕಾರು ನಕಾಮುರಾ ವಿರುದ್ಧ ಗುಕೇಶ್ ಡ್ರಾ ಮಾಡಿಕೊಂಡರು. ಗುಕೇಶ್ ಅವರು ವಿಶ್ವನಾಥನ್ ಆನಂದ್ ಬಳಿಕ ಕ್ಯಾಂಡಿಡೇಟ್ಸ್‌ ಚೆಸ್‌ ಟೂರ್ನಿಯಲ್ಲಿ ಗೆದ್ದ ಎರಡನೇ ಭಾರತೀಯ ಎನಿಸಿದ್ದಾರೆ.