ದೆಹಲಿ: ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗೆ ಅಣಿಯಾಗುತ್ತಿದೆ. ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ.

ಲೋಕಸಭಾ ಚುನಾವಣೆಗೆ
ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಇಲ್ಲಿ ಸಭೆ ಸೇರಲಿದೆ. ಈ ಸಭೆಯಲ್ಲಿ ಮೊದಲ ಪಟ್ಟಿ ಅಂತಿಮಗೊಳಿಸಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಅಂಬಿಕಾ ಸೋನಿ, ಅಧೀರ್ ರಂಜನ್ ಮೊದಲಾದ ನಾಯಕರು ಭಾಗಿಯಾಗಲಿದ್ದಾರೆ.

ಖರ್ಗೆ ನೇತೃತ್ವದ ಸಭೆಯಲ್ಲಿ ಪ್ರತಿ ರಾಜ್ಯಗಳು ನೀಡಿರುವ ಪಟ್ಟಿಯನ್ನು ಪರಾಮರ್ಶೆ ನಡೆಸಿ ಅಂತಿಮ ಅಂಕಿತ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರದ ಆಡಳಿತಾರೂಢ ಬಿಜೆಪಿ ಈಗಾಗಲೇ 195 ಜನರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಲೋಕಸಭೆ ಚುನಾವಣೆ ಅಂಗವಾಗಿ ಪಕ್ಷದ ಪ್ರಣಾಳಿಕೆ ಸಮಿತಿ ಸಿದ್ಧಪಡಿಸಿರುವ ಕರಡು ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಅವರಿಗೆ ಬುಧವಾರ ಹಸ್ತಾಂತರ ಮಾಡಲಾಗಿದೆ. ಕರಡು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವಕರಿಗೆ ‘ಉದ್ಯೋಗದ ಹಕ್ಕು’ ತರಲಾಗುವುದು. ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ, ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ, ಜಾತಿ ಗಣತಿ, ವಿವಿಧ ಸಮುದಾಯಗಳಿಗೆ ಆರ್ಥಿಕ ನೆರವು ನೀಡುವ ಅಂಶ ಪ್ರಸ್ತಾಪಿಸಲಾಗಿದೆ. ಇದಕ್ಕೆ ಪಕ್ಷದ ವರಿಷ್ಠರ ಸಮ್ಮತಿ, ಬಳಿಕ ಸಿಡಬ್ಲ್ಯುಸಿ ಅನುಮೋದನೆ ಪಡೆದು ಬಿಡುಗಡೆ ಮಾಡಲಾಗುವುದು.