ಕಾವೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ದ. ಕ. ಜಿ. ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಕೊಡುಗೆಯಾಗಿ ನೀಡಿದ್ದು, ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಮ. ನ. ಪಾ ಸದಸ್ಯೆ ಸುಮಂಗಲ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾವೂರು ವಲಯದ ಮೇಲ್ವಿಚಾರಕ ಅಭಿಮಾನ್ ಜೈನ್,ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಜೇಶ್ ಶೆಟ್ಟಿ,ಶಾಂತಿನಗರ ಒಕ್ಕೂಟದ ಪದಾಧಿಕಾರಿಗಳಾದ ಜಮೀಲ, ರಂಜನಿ, ನೇತ್ರಾಕ್ಷಿ, ಸೇವಾ ಪ್ರತಿನಿಧಿ ಸಂಗೀತ, ಶಾಲಾಭಿವೃದ್ಧಿ ಸಮಿತಿ ಸದಸ್ಯ ದೊಂಬಯ್ಯ,ಶಾಲಾ ಹಳೆ ವಿದ್ಯಾರ್ಥಿ ಹಸನಬ್ಬ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಜೆ ಸ್ವಾಗತಿಸಿದರು, ಸಹ ಶಿಕ್ಷಕಿ ಆಶಾ ನಿರೂಪಿಸಿದರು, ದೈಹಿಕ ಶಿಕ್ಷಕಿ ವಿಜಯಲಕ್ಷ್ಮಿ ಧನ್ಯವಾದಗೈದರು.