ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.