ಬೆಳಗಾವಿ :
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ.

ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಎಸ್ಪಿ ಭೀಮಶಂಕರ್ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.