ಬೆಂಗಳೂರು : ಮಳೆ ಇಲ್ಲದೆ ನೀರಿನ ಅಭಾವ ಎದುರಿಸುತ್ತಿರುವ ನಡುವೆ ಇದೀಗ ನಾಡಿನ ಜನತೆಗೆ ಸಿಹಿ ಸುದ್ದಿ. ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24 ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.