ಬೆಂಗಳೂರು :
ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಇದೊಂದು ಶುಭ ಸುದ್ದಿ.
ರಾಜ್ಯದಲ್ಲಿ ಪ್ರಖರ ಬಿಸಿಲಿನ ಮಧ್ಯೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 5 ದಿನ (ಮಾ. 28 – ಏಪ್ರಿಲ್ 1) ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು-ಮಿಂಚು ಸಹಿತ ಸಾಧಾರಣದಿಂದ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಬೆಂಗಳೂರಿನಲ್ಲಿ ಮಾತ್ರ ಸೆಕೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಮಳೆಯಾಗಬಹುದು ಎನ್ನಲಾಗಿದೆ.