ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮುಂದಿನ 24 ಗಂಟೆಗೆ ಅತ್ಯಧಿಕ ಮಳೆ ಆಗುವ ಹಿನ್ನೆಲೆಯಲ್ಲಿ ಕರಾವಳಿಯ ಉತ್ತರ ಕನ್ನಡ ಹಾಗೂ ಉಡುಪಿ ಈ ಎರಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ನಂತರ ಆಗಸ್ಟ್ 29ರವರೆಗೆ ಭಾರೀ ಮಳೆ ಆಗಲಿದ್ದು, ಕರಾವಳಿ ಜಿಲ್ಲೆಗಳಿಗೆ ‘ಹಳದಿ ಎಚ್ಚರಿಕೆ’ ನೀಡಲಾಗಿದೆ. ಸೋಮವಾರ ಆಗಸ್ಟ್ 26ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹಳದಿ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ವಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿ, ಮಲೆನಾಡು ಹಾಗೂ ಕೊಡಗಿನಲ್ಲಿ ಸೋಮವಾರ ಗುಡುಗು ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನುಳಿದ ದಿನಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.