ಬೆಂಗಳೂರು : ಪೂರ್ವ ಅರಬ್ಬೀ ಸಮುದ್ರದಲ್ಲಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳದ ತೀರದಲ್ಲಿ ಟ್ರಫ್ ಮುಂದುವರಿದಿದೆ. ಆಗಸ್ಟ್ 29 ರಂದು ವಾಯುಭಾರ ಕುಸಿತ ಆಗುವ ಹೆಚ್ಚಿನ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 28 ರಿಂದ ಸೆ. 1 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 28 ರಂದು ಯೆಲ್ಲೋ ಅಲರ್ಟ್ ಹಾಗೂ ಆಗಸ್ಟ್ 29, 30, ಹಾಗೂ 31 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಆ 28 ರಂದು ಯೆಲ್ಲೋ ಅಲರ್ಟ್ ಹಾಗೂ ಆಗಸ್ಟ್‌ 29,30 ಹಾಗೂ 31 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.
ಬೀದರ, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಆಗಸ್ಟ್ 30 -31 ರಂದು ಹಾಗೂ ಸೆ,1 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನ ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.