ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 13ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ನವೆಂಬರ್ 13ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ ಉತ್ತರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ನ.14ರಿಂದ ಮುಂದಿನ 3 ದಿನ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ನ.14ರಿಂದ 16ರ ವರೆಗೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ನ.13ರಿಂದ ನ.16ರ ವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ನ.15ರಿಂದ ನ.16ರವರೆಗೆ ಮಳೆ ಇರಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಎಂದು ಮಾಹಿತಿ ನೀಡಿದೆ.